ಬೆಂಗಳೂರು:- ಸರ್ಕಾರ ಆರು ತಿಂಗಳಲ್ಲಿ ಜಾರಿಗೊಳಿಸಿದ ಅಭಿವೃದ್ಧಿ ಯೋಜನೆಗಳ ವರದಿ ನೀಡಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಮಾತನ...
ಬೆಂಗಳೂರು:- ಸರ್ಕಾರ ಆರು ತಿಂಗಳಲ್ಲಿ ಜಾರಿಗೊಳಿಸಿದ ಅಭಿವೃದ್ಧಿ ಯೋಜನೆಗಳ ವರದಿ ನೀಡಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲಿ ಬಜೆಟ್ನಲ್ಲಿ ಘೊಷಿಸಿರುವ ಎಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.
ಈ ಸರ್ಕಾರ ಬಂದು ಆರು ತಿಂಗಳಾಯಿತು. ಈ ಸರ್ಕಾರದ ಬಗ್ಗೆ ಜನರು ಭ್ರಮ ನಿರಸನಗೊಂಡಿದ್ದಾರೆ. ಇವರು ಪದೇ ಪದೆ ಗ್ಯಾರಂಟಿಗಳ ಬಗ್ಗೆ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿಲ್ಲ ಎಂದು ಆರೋಪಿಸಿದರು.
ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಹತ್ತು ಕೆಜಿ ಅಕ್ಕಿ ಕೊಡುವ ಬದಲು ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಅದರ ಹೊರತಾಗಿ ಕಾಳ ಸಂತೆಯಲ್ಲಿ ಮುಕ್ತವಾಗಿ ಮಾರಾಟ ಮಾಡುತ್ತಿದ್ದಾರೆ. ಅದನ್ನು ತಡೆಯಲು ಯಾವುದೇ ಕ್ರಮ ಕೈಗೊಳ್ಳದಿರುವುದು ಸರ್ಕಾರ ಶಾಮೀಲಾಗಿದೆ ಅಂತ ಅನುಮಾನ ಬರುತ್ತಿದೆ. ಗೃಹ ಲಕ್ಷ್ಮಿ ಯೋಜನೆ ಸಮೀಕ್ಷೆ ಮಾಡಿದರೆ ಮೊದಲ ತಿಂಗಳು ಕೇವಲ ಶೇ.35% ರಷ್ಟು ಮಹಿಳೆಯರಿಗೆ ಬಂದಿದೆ. ನಂತರದ ಕಂತುಗಳು ಸರಿಯಾಗಿ ಬಂದಿಲ್ಲ. ಗೃಹ ಲಕ್ಷ್ಮಿಯರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ವಿದ್ಯುತ್ ವಿಚಾರದಲ್ಲಂತೂ ಸರ್ಕಾರ ರೈತರಿಗೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಐದು ಗಂಟೆ ನಿರಂತರ ವಿದ್ಯುತ್ ಕೊಡುವುದಾಗಿ ಹೇಳಿದ್ದಾರೆ. ಆದರೆ, ರೈತರಿಗೆ ಕೇವಲ 3 ಗಂಟೆ ಮಾತ್ರ ವಿದ್ಯುತ್ ಸಿಗುತ್ತಿದೆ. ಆದರೆ, ರಾಜ್ಯ ಕಾಂಗ್ರೆಸ್ ನಾಯಕರು ಸುಮ್ಮನೆ ತೆಲಂಗಾಣಕ್ಕೆ ಹೋಗಿ ಗ್ಯಾರಂಟಿಗಳ ಬಗ್ಗೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.